newsics.com
ಬೆಂಗಳೂರು: ಓದಿನಲ್ಲಿ ಆಸಕ್ತಿ ಇಲ್ಲ. ಕ್ರೀಡೆಯಲ್ಲಿ ಆಸಕ್ತಿ ಇದೆ ಎಂದು ಹೇಳಿ ಮನೆ ಬಿಟ್ಟು ನಾಪತ್ತೆಯಾಗಿದ್ದ ಮೂವರು ಮಕ್ಕಳನ್ನು ರಕ್ಷಿಸಲಾಗಿದೆ. ಬೆಂಗಳೂರಿನ ಉಪ್ಪಾರ ಪೇಟೆ ಪೊಲೀಸರು ಮಕ್ಕಳನ್ನು ರಕ್ಷಿಸಿದ್ದಾರೆ.
ಪೇಪರ್ ಹಂಚುವ ವ್ಯಕ್ತಿಯ ಸಮಯ ಪ್ರಜ್ಞೆಯಿಂದ ಮಕ್ಕಳನ್ನು ರಕ್ಷಿಸಲಾಗಿದೆ.
ಪರೀಕ್ಷಿತ್, ಕಿರಣ್ ಮತ್ತು ನಂದನ್ ಎಂಬ ಬಾಲಕರು ಇದೀಗ ಸುರಕ್ಷಿತರಾಗಿದ್ದಾರೆ. ಇದೇ ವೇಳೆ ನಾಪತ್ತೆಯಾಗಿರುವ ಇತರ ನಾಲ್ಕು ಬಾಲಕರ ಕುರಿತಂತೆ ಯಾವುದೇ ಮಾಹಿತಿ ದೊರೆತಿಲ್ಲ.
ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.