ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದೆ. ನಗರದ ಅವೆನ್ಯೂ ರಸ್ತೆಯಲ್ಲಿ ನಸುಕಿನ ಜಾವ 4 ಗಂಟೆ ಹೊತ್ತಿಗೆ ಈ ದುರಂತ ಸಂಭವಿಸಿದೆ. ಅದೃಷ್ಟವಶಾತ್ ಕಟ್ಟಡ ಕುಸಿದು ಬಿದ್ದ ಪರಿಣಾಮ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಪ್ಲಾಸ್ಟಿಕ್ ಮತ್ತು ಗಿಪ್ಟ್ ಐಟಂ ಗಳ ಅಂಗಡಿಗಳು ಈ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿತ್ತು ಎಂದು ವರದಿಯಾಗಿದೆ.
ಭಂಡಾರಿ ಎಂಬವರಿಗೆ ಸೇರಿದ ಕಟ್ಟಡ ಇದಾಗಿದೆ. ಅವೆನ್ಯೂ ರಸ್ತೆಯ ಬೆಳ್ಳಿ ಬಸವ ದೇವಸ್ಥಾನದ ಬಳಿ ಈ ದುರಂತ ಸಂಭವಿಸಿದೆ