Thursday, December 2, 2021

ಗಲಭೆಪೀಡಿತ ಬೆಂಗಳೂರಿನ ಪಾದರಾಯನಪುರದಲ್ಲಿ ಬಿಗಿ ಬಂದೋಬಸ್ತ್

Follow Us

ಬೆಂಗಳೂರು: ಕೊರೋನಾ ಶಂಕಿತರನ್ನು ಕ್ವಾರಂಟೈನ್‍ಗೆ ಕರೆದೊಯ್ಯುವ ವೇಳೆ ಇಲ್ಲಿನ ಪಾದರಾಯನಪುರದಲ್ಲಿ ಕೆಎಸ್‍ಆರ್‍ಪಿ ಹಾಗೂ ಸಿಎಆರ್ ನ 15 ತುಕಡಿಗಳನ್ನು ನಿಯೋಜಿಸಲಾಗಿದೆ.
ಭಾನುವಾರ ಸಂಜೆ ಉಂಟಾದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಇಬ್ಬರು ಡಿಸಿಪಿ, ಐವರು ಎಸಿಪಿ, 15 ಇನ್ಸ್‍ಪೆಕ್ಟರ್, 25 ಸಬ್ ಇನ್ಸ್‍ಪೆಕ್ಟರ್ ಹಾಗೂ 150 ಸಹಾಯಕ ಸಬ್‍ಇನ್ಸ್‍ಪೆಕ್ಟರ್‍ಗಳನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತೀವ್ರ ನಿಗಾ ವಹಿಸಲಾಗಿದೆ ಎಂದು ಸ್ಥಳದಲ್ಲೇ ಮೊಕ್ಕಾಂ ಹೂಡಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ತಿಳಿಸಿದ್ದಾರೆ.
5 ಪ್ರಕರಣ ದಾಖಲು:
ಘಟನೆಗೆ ಸಂಬಂಧಿಸಿದಂತೆ ಐದು ಪ್ರಕರಣಗಳನ್ನು ದಾಖಲಿಸಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...

ಮತ್ತೆ 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ

newsics.com ಶಿವಮೊಗ್ಗ: ಇಲ್ಲಿನ ಖಾಸಗಿ ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದೆ. ಕಾಲೇಜಿನ ಉಳಿದ ವಿದ್ಯಾರ್ಥಿಗಳು ಹಾಗೂ ಇತರ ಸಿಬ್ಬಂದಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿ ಬರಬೇಕಾಗಿದೆ. ಹೀಗಾಗಿ ನಗರದ ಹೊರವಲಯದಲ್ಲಿರುವ ನರ್ಸಿಂಗ್...
- Advertisement -
error: Content is protected !!