Saturday, April 17, 2021

ನಾಳೆ ಪ್ರಥಮ ಪಿಯು ಫಲಿತಾಂಶ; ಮೊಬೈಲ್/ ಮೇಲ್’ಗೆ ರಿಸಲ್ಟ್

ಬೆಂಗಳೂರು: ಪ್ರಥಮ ಪಿಯು ಫಲಿತಾಂಶ ಮಂಗಳವಾರ (ಮೇ 5) ಪ್ರಕಟವಾಗಲಿದೆ. ವಿದ್ಯಾರ್ಥಿಗಳ ಮೊಬೈಲ್‌ಗೆ ಅಥವಾ ಇ-ಮೇಲ್‌ಗೆ ಫಲಿತಾಂಶದ ವಿವರ ತಲುಪಲಿದೆ.
ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಕೊರೋನಾ.ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಅಥವಾ ಪೋಷಕರು ಫಲಿತಾಂಶ ತಿಳಿಯಲು ಕಾಲೇಜುಗಳಿಗೆ ಆಗಮಿಸುವುದನ್ನು ನಿಷೇಧಿಸಲಾಗಿದೆ. ಕಾಲೇಜುಗಳ ಸೂಚನಾ ಫಲಕಗಳಲ್ಲಿ ಫಲಿತಾಂಶ ಪ್ರಕಟಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ಪೋಷಕರು ಕಂತುಗಳ ಮೂಲಕ ಕಾಲೇಜು ಶುಲ್ಕ ಪಾವತಿಸಲು ಶಿಕ್ಷಣ ಸಂಸ್ಥೆಗಳು ಸಹಕರಿಸಬೇಕು. 2020-21 ನೇ ಈ ಸಾಲಿಗೆ ಯಾವುದೇ ಕಾರಣಕ್ಕೂ ಬೋಧನ ಶುಲ್ಕವನ್ನು ಹೆಚ್ಚಿಸಬಾರದೆಂದು ಇಲಾಖೆಯು ನಿರ್ದೇಶನ ನೀಡಿದೆ. ಒಂದು ವೇಳೆ ಈ ಬಗ್ಗೆ ದೂರುಗಳು ಬಂದಲ್ಲಿ, ಕಾಲೇಜುಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಈ ಹಿಂದೆ ತಮ್ಮ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದರು.

ಮತ್ತಷ್ಟು ಸುದ್ದಿಗಳು

Latest News

ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ

newsics.com ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17)...

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  11,41,998  ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಹೊಸದಾಗಿ 11,...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...
- Advertisement -
error: Content is protected !!