newsics.com
ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ.
ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ ಕುಟುಂಬ ಅಂಗಾಂಗ ದಾನ ಮಾಡಲು ಮುಂದಾಗಿತ್ತು.
ತನ್ನ ಅಂಗಾಂಗ ದಾನದ ಮೂಲಕ ಸಾವಿನಲ್ಲೂ 6 ಮಂದಿಗೆ ಮರುಜೀವ ನೀಡಿದ್ದಾರೆ.
ಹೃದಯವನ್ನು ಅಪೋಲೊ ಆಸ್ಪತ್ರೆಯಿಂದ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದವರೆಗೆ ಗ್ರೀನ್ ಕಾರಿಡಾರ್ ಆಂಬುಲೆನ್ಸ್ ಮೂಲಕ ಕೊಂಡೊಯ್ದು, ಬಳಿಕ ವಿಮಾನದಲ್ಲಿ ಚೆನ್ನೈಗೆ ಸಾಗಿಸಲಾಗಿದೆ. ಚೆನ್ನೈನ ಎಂಜಿಎಂ ಹೆಲ್ತ್ ಕೇರ್ಗೆ ಹೃದಯವನ್ನು ರವಾನೆ ಮಾಡಲಾಗಿದೆ.