newsics.com
ಚಿಕ್ಕಬಳ್ಳಾಪುರ: ಹೈದರಾಬಾದ್ ಕಡೆಗೆ ಹೋಗುತ್ತಿದ್ದ ಕಾರಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ದುರಂತ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು (ಸೆ.15) ಸಂಭವಿಸಿದೆ. ಹೈದರಾಬಾದ್ ಮೂಲದ ಜಯಶ್ರೀ(50), ಅಕ್ಷಯ್(28), ಹರ್ಷ(24) ಮೃತಪಟ್ಟ ದುರ್ದೈವಿಗಳು. ಅಪಘಾತದಲ್ಲಿ ದಿನೇಶ್ (50) ಎಂಬುವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳು ದಿನೇಶ್ ಬೆಂಗಳೂರಿನ ಜಿಗಣಿ ಸಮೀಪ ಮಾರ್ಬಲ್ ಶೋ ರೂಂ ನಡೆಸುತ್ತಿದ್ದು, ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಹೈದರಾಬಾದ್‍ಗೆ ಕಾರಿನಲ್ಲಿ ತೆರಳುತ್ತಿದ್ದರು.
ರಾಷ್ಟ್ರೀಯ ಹೆದ್ದಾರಿ 7, ಚಿಕ್ಕಬಳ್ಳಾಪುರ ತಾಲ್ಲೂಕಿನ ಚಿಕ್ಕಪೇಲಗುರ್ಕಿ ಬಳಿ ಹೋಗುತ್ತಿದ್ದಾಗ ಹಂಪ್ಸ್ ಇದ್ದ ಕಾರಣ ಕಾರು ನಿಧಾನವಾಗಿ ಚಲಿಸಿದ್ದರಿಂದ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಕಾರಿಗೆ ಲಾರಿ ಡಿಕ್ಕಿ; ಒಂದೇ ಕುಟುಂಬದ ಮೂವರ ಸಾವು
Follow Us