newsics.com
ಮೈಸೂರು: ಬಸ್ ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಿ.ನರಸೀಪುರ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ತಿ.ನರಸೀಪುರದಿಂದ ಮೈಸೂರಿನತ್ತ ಬರುತ್ತಿದ್ದ ಆಟೋ ರಿಕ್ಷಾಗೆ ಮೈಸೂರಿನಿಂದ ತಿ.ನರಸೀಪುರದ ಕಡೆ ಹೋಗುತ್ತಿದ್ದ ಬಸ್ ವರಕೋಡು ಗ್ರಾಮದ ತಿರುವೊಂದರಲ್ಲಿ ಡಿಕ್ಕಿಯಾಗಿದೆ.
ಅಪಘಾತದ ಭೀಕರತೆಗೆ ಆಟೋ ಸಂಪೂರ್ಣ ಜಖಂಗೊಂಡಿದ್ದು, ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.