newsics.com
ಬೆಂಗಳೂರು: ರಾಜ್ಯದ ಇಬ್ಬರು ಐಪಿಎಸ್ ಅಧಿಕಾರಿಗಳು ರಾಷ್ಟ್ರಪತಿ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ. ಸಿಐಡಿಯಲ್ಲಿ ಎಡಿಜಿಪಿಯಾಗಿರುವ ಉಮೇಶ್ ಕುಮಾರ್ ಮತ್ತು ಆಂತರಿಕ ಭದ್ರತೆ ವಿಭಾಗದಲ್ಲಿ ಎಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿರುವ ಅರುಣ್ ಚಕ್ರವರ್ತಿ ರಾಷ್ಟ್ರಪತಿ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ. ಅರುಣ್ ಚಕ್ರವರ್ತಿ ಶಿವಮೊಗ್ಗದಲ್ಲಿ ಎಸ್ ಪಿ . ಯಾಗಿ ಕರ್ತವ್ಯ ನಿರ್ವಹಿಸಿದ್ದರು.
ರಾಜ್ಯದ 19 ಪೊಲೀಸ್ ಅಧಿಕಾರಿಗಳು ಅತ್ಯುನ್ನತ ಸೇವಾ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ.
75ನೇ ಸ್ವಾತಂತ್ರ್ಯ ವರ್ಷಾಚರಣೆ ಅಂಗವಾಗಿ ಈ ಪುರಸ್ಕಾರ ಪ್ರಕಟಿಸಲಾಗಿದೆ.