Thursday, December 2, 2021

ರಾಮನಗರ ಜೈಲಿನಲ್ಲಿದ್ದ ಇಬ್ಬರು ಪಾದರಾಯನಪುರ ಆರೋಪಿಗಳಿಗೆ ಸೋಂಕು

Follow Us

ಬೆಂಗಳೂರು: ಇಲ್ಲಿನ ಪಾದರಾಯನಪುರದಲ್ಲಿ ವೈದ್ಯರು ಹಾಗೂ ಪೊಲೀಸರ ಮೇಲೆ ಹಲ್ಲೆಮಾಡಿದ್ದ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಹಲ್ಲೆ ಮಾಡಿದ್ದ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು. ಹೀಗೆ ಸ್ಥಳಾಂತರಗೊಂಡಿದ್ದ 124 ಜನರಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ರಾಮನಗರ ಜಿಲ್ಲಾ ಕಾರಾಗಾರಕ್ಕೆ ಸ್ಥಳಾಂತರಿಸಿದ್ದ 124 ಶಂಕಿತರಲ್ಲಿ ಇಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವುದರಿಂದ ಅವರನ್ನು ಬೆಂಗಳೂರಿನ ಹಜ್‌ಭವನಕ್ಕೆ ಸ್ಥಳಾಂತರ ಮಾಡಲು ಸಿದ್ಧತೆಗಳು ನಡೆದಿವೆ. ಸೋಂಕು ತಗುಲಿರುವುದು ರಾಮನಗರ ಜಿಲ್ಲಾ ಕಾರಾಗೃಹ ಸಿಬ್ಬಂದಿಗೆ ಆತಂಕ ಶುರುವಾಗಿದೆ. ಹೀಗಾಗಿ ಜೈಲಿನ ಸಿಬ್ಬಂದಿ ಪ್ರತಿಭಟನೆಯನ್ನೂ ನಡೆಸುತ್ತಿದ್ದಾರೆ. ಈ ಆರೋಪಿಗಳನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಿದ್ದರಿಂದ ಹಸಿರು ವಲಯದಲ್ಲಿದ್ದ ರಾಮನಗರದಲ್ಲೂ ಆತಂಕ ಸೃಷ್ಟಿಯಾಗಿದೆ. ಈ ಬೆಳವಣಿಗೆಯಿಂದ ಹಲವು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಕ್ವಾರಂಟೈನ್ ಗೆ ಒಳಗಾಗಬೇಕಾದ ಅನಿವಾರ್ಯತೆ ಉಂಟಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ 66...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!