ಕೋಲಾರ: ಉಗ್ರ ಮೆಹಬೂಬ್ ಎಂಬಾತನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ ಕೋಲಾರದಲ್ಲಿ ಇಬ್ಬರು ವ್ಯಕ್ತಿಗಳನ್ನು ತಮಿಳುನಾಡು ಮೂಲದ ಕ್ಯೂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ಕೋಲಾರದ ಪ್ರಶಾಂತ್ ನಗರದ ಮೊಹಮದ್ ಜಹೀದ್ (28),ಬೀಡಿ ಕಾಲೋನಿಯ ನಿವಾಸಿ ಇಮ್ರಾನ್ ಖಾನ್ (42)ಬಂಧಿತ ಆರೋಪಿಗಳು.
ಬೆಂಗಳೂರಿನಲ್ಲಿ ನಕಲಿ ದಾಖಲಾತಿ ಸಿದ್ದ ಮಾಡಿಕೊಂಡು ವಿದೇಶಕ್ಕೆ ಹಾರಲು ಸಿದ್ದವಾಗಿದ್ದ 12 ಜನರ ತಂಡದಲ್ಲಿ ಇಬ್ಬರನ್ನು ಪೊಲೀಸರು ಜ.3ರಂದು ಬಂಧಿಸಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸರಿಗೂ ಮಾಹಿತಿ ಇರಲಿಲ್ಲ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದ ಮೇಲೆ ಈ ವಿಷಯ ಬೆಳಕಿಗೆ ಬಂದಿದೆ.