newsics.com
ಬೆಂಗಳೂರು: ಆಗಸ್ಟ್ 16ರಿಂದ ಪ್ರಥಮ ಪಿಯು ತರಗತಿಗಳನ್ನು ಆರಂಭಿಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಕಾಲೇಜುಗಳಿಗೆ ಸೂಚನೆ ನೀಡಿದೆ.
ಈಗಾಗಲೇ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗುವ ಮೊದಲೇ ರಾಜ್ಯದ ಪ್ರತಿಷ್ಠಿತ ಕಾಲೇಜುಗಳು ಪ್ರಥಮ ಪಿಯುಸಿ ತರಗತಿಗಳಿಗೆ ವಿದ್ಯಾರ್ಥಿಗಳನ್ನು ಸೇರಿಸಿಕೊಂಡಿವೆ.
ಎಸ್ಸೆಸ್ಸೆಲ್ಸಿಯಲ್ಲಿ ಈ ಬಾರಿ ಓರ್ವ ವಿದ್ಯಾರ್ಥಿಯನ್ನು ಹೊರತುಪಡಿಸಿ ಎಲ್ಲರೂ ತೇರ್ಗಡೆಯಾಗಿರುವುದರಿಂದ ಪಿಯುಸಿ ದಾಖಲಾತಿ ಪ್ರಮಾಣವೂ ಹೆಚ್ಚಾಗಲಿದೆ. ಹೀಗಾಗಿ ಪ್ರಥಮ ಪಿಯುಸಿ ತರಗತಿಗಳಿಗೆ ಆ.31ರೊಳಗೆ ದಾಖಲಾತಿ ಪ್ರಕ್ರಿಯೆ ನಡೆಸುವಂತೆ ಇಲಾಖೆ ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಿದೆ.
ವಿದ್ಯಾರ್ಥಿಗಳು ಯಾವುದೇ ದಂಡ ಶುಲ್ಕವಿಲ್ಲದೆ ಆ.31ರವರೆಗೆ ದಾಖಲಾತಿ ಪಡೆಯಬಹುದಾಗಿದೆ. ಸೆಪ್ಟೆಂಬರ್ 1ರಿಂದ 11ರ ಅವಧಿಯಲ್ಲಿ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಂದ 670 ರೂ. ವಿಳಂಬ ಶುಲ್ಕ ಸಂಗ್ರಹಿಸಬೇಕು. ಸೆ.13ರಿಂದ 25ರ ಅವಧಿಯಲ್ಲಿ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಂದ 2890 ರೂ. ದಂಡ ಶುಲ್ಕ ಪಡೆಯುವಂತೆ ಇಲಾಖೆ ನಿರ್ದೇಶನ ನೀಡಿದೆ.
2021-22ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈಗಾಗಲೇ ಆನ್‌ಲೈನ್ ಮೂಲಕ ತರಗತಿಗಳು ನಡೆಯುತ್ತಿವೆ. ಪ್ರಥಮ ಪಿಯುಸಿ ಪ್ರವೇಶ ಪ್ರಕ್ರಿಯೆ ಆರಂಭವಾಗಿರುವುದರಿಂದ ಆ.16ರಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೂ ತರಗತಿಗಳನ್ನು ಆರಂಭಿಸಬೇಕು ಎಂದು ಎಲ್ಲ ಪಿಯು ಕಾಲೇಜಿನ ಪ್ರಾಂಶುಪಾಲರಿಗೆ ಇಲಾಖೆ ಸೂಚಿಸಿದೆ.
ಭುಗಿಲೆದ್ದ ಖಾತೆ ಅಸಮಾಧಾನ: ಸಚಿವ ಆನಂದ್ ಸಿಂಗ್ ಕಚೇರಿಯೇ ಬಂದ್, ನಾಮಫಲಕ ತೆರವು
ಒಲಿಂಪಿಕ್ಸ್’ನಲ್ಲಿ ಅನುಚಿತ ವರ್ತನೆ: ವಿನೇಶ್ ಪೋಗಟ್ ಅಮಾನತು, ಸೋನಂ ಮಲಿಕ್’ಗೆ ನೋಟಿಸ್
ರಾಜ್ಯಗಳಿಗೆ ಓಬಿಸಿ ಪಟ್ಟಿ ಸೇರ್ಪಡೆ ಹೊಣೆ: ಲೋಕಸಭೆಯಲ್ಲಿ ಮಸೂದೆ ಅಂಗೀಕಾರ
ಗರ್ಭಿಣಿಯಾಗಿದ್ದಾಗ ಸೆಕ್ಸ್ ಮೇಲಿನ ಆಸಕ್ತಿ ಕಳೆದುಕೊಂಡೆ: ನಟಿ ಕರೀನಾ ಕಪೂರ್