Wednesday, November 30, 2022

ಅನ್’ಲಾಕ್ ಎಫೆಕ್ಟ್: ಒಂದೇ ದಿನ ಬೆಂಗಳೂರಿನ‌ 2 ಕಡೆ ಸರಗಳ್ಳತನ

Follow Us

newsics.com
ಬೆಂಗಳೂರು: ಕೊರೋನಾದಿಂದಾಗಿ ಲಾಕ್’ಡೌನ್ ಆಗಿದ್ದ ಬೆಂಗಳೂರಲ್ಲಿ ಅನ್’ಲಾಕ್ ಆಗುತ್ತಿದ್ದಂತೆಯೇ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ.

ಅನ್’ಲಾಕ್ ಆಗಿ 24 ಗಂಟೆ ಕಳೆಯುವುದರೊಳಗೇ ಅಂದರೆ ಸೋಮವಾರ(ಜೂ.21) ಒಂದೇ ದಿನ ಬೆಂಗಳೂರಿನ ಎರಡು ಕಡೆ ಸರಗಳ್ಳತನ ಪ್ರಕರಣಗಳು ನಡೆದಿವೆ.
ಜಯನಗರ ಮತ್ತು ಕೊಡಿಗೆಹಳ್ಳಿಯಲ್ಲಿ ಸರ ಎಗರಿಸಿದ ಖದೀಮರು ಪರಾರಿಯಾಗಿದ್ದಾರೆ.
ಕೊಡಿಗೆಹಳ್ಳಿಯಲ್ಲಿ ವೃದ್ದೆಯ ಸರ ಅಪಹರಣ ಮಾಡಿದ್ದಾರೆ. ಸೋಮವಾರ ಬೆಳಗ್ಗೆ 8.30ರ ಸುಮಾರಿಗೆ ಲಕ್ಷ್ಮಿ ಎಂಬುವರು ಓಡಾಡುತ್ತಿದ್ದಾಗ ಬೈಕ್ ನಲ್ಲಿ ಬಂದಿದ್ದ ಇಬ್ಬರು ಸರಗಳ್ಳರು ಕೈಚಳಕ ತೋರಿದ್ದಾರೆ. ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಯನಗರ ಸಾಕಮ್ಮ ಗಾರ್ಡನ್ ಬಳಿಯಿಂದ ಮತ್ತೊಂದು ಪ್ರಕರಣ ವರದಿಯಾಗಿದೆ ರಾಜೇಶ್ವರಿ ಎಂಬುವರ 72 ಗ್ರಾಂ ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದಾರೆ. ಸಿಸಿಟಿವಿಯಲ್ಲಿ ದೃಶ್ಯಾವಳಿ ಸೆರೆಯಾಗಿದೆ.

ಅಂದು ಆಕ್ಸಿಜನ್ ಪೈಪ್ ಹಾಕಿಕೊಂಡೇ ಸಂಗೀತ ಕಛೇರಿ ನಡೆಸಿಕೊಟ್ಟಿದ್ದ ಸಿತಾರ್ ಮಾಂತ್ರಿಕ!

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!