Thursday, December 9, 2021

50 ವರ್ಷ ಮೇಲ್ಪಟ್ಟ ಸರ್ಕಾರಿ ನೌಕರರಿಗೆ ಏ.4ರವರೆಗೆ ರಜೆ

Follow Us

ಬೆಂಗಳೂರು: ಕೊರೋನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ರಾಜ್ಯದ 50 ವರ್ಷ ಮೇಲ್ಪಟ್ಟ ಸರ್ಕಾರಿ ನೌಕರರಿಗೆ ಏಪ್ರಿಲ್ 4ರವರೆಗೆ ಸರ್ಕಾರ ವೇತನಸಹಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಸರ್ಕಾರದ ಉಪ ಕಾರ್ಯದರ್ಶಿ ಚಂದ್ರಹಾಸ ಗಂ ತಾಳೂಕರ, ವೈರಾಣು ತಡೆಗಟ್ಟುವ ನಿಟ್ಟಿನಲ್ಲಿ ಭಾರತ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಇದೇ ಮಾದರಿಯ ಕ್ರಮ ಅನುಸರಿಸುವಂತೆ ಭಾರತ ಸರ್ಕಾರವು ಎಲ್ಲ ರಾಜ್ಯ ಸರ್ಕಾರಿಗಳಿಗೆ ಸೂಚನೆ ನೀಡಿರುತ್ತದೆ.
50 ವರ್ಷ ಮೀರಿದ ಹಾಗೂ ಮಧುಮೇಹ, ಉಸಿರಾಟದ ತೊಂದರೆಗಳು, ಮೂತ್ರಪಿಂಡ ಖಾಲಿಯೆ, ಸೇರಿದಂತೆ ಇತರೆ ಮಾರಣಾಂತಿಕ ಖಾಯಿಲೆಗಳಿಂದ ಬಳಲುತ್ತಿರುವ ಸರ್ಕಾರಿ ನೌಕರರು ಸ್ವಸುರಕ್ಷಿತ ವಲಯದಲ್ಲಿ ಇರಲು ಇಚ್ಚಿಸಿದಲ್ಲಿ, ಏಪ್ರಿಲ್ 4ರವರೆಗೆ ಯಾವುದೇ ವೈದ್ಯಕೀಯ ಪ್ರಮಾಣಪತ್ರವನ್ನು ಹಾಜರುಪಡಿಸದೇ, ರಜೆಯನ್ನು ಪಡೆಯಲು ಅರ್ಹರಿರುತ್ತಾರೆ. ಈ ಮೂಲಕ ಸಂಬಂಧ ಪಟ್ಟ ಎಲ್ಲಾ ಇಲಾಖೆಗಳ ನಿಯಂತ್ರಣಾಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!