Wednesday, July 6, 2022

ಹಿರಿಯ ನಟಿ ಬಿ‌.ಶಾಂತಮ್ಮ ಇನ್ನಿಲ್ಲ

Follow Us

ಮೈಸೂರು: ಕನ್ನಡ ಸ್ಯಾಂಡಲವುಡ್ ಹಿರಿಯ ಪೋಷಕ ನಟಿ ಬಿ‌.ಶಾಂತಮ್ಮ(95) ಭಾನುವಾರ ನಿಧನರಾದರು.
ಮೈಸೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಶಾಂತಮ್ಮ ಕೊನೆಯುಸಿರೆಳೆದಿದ್ದು, ಅವರಿಗೆ ಮೂವರು ಮಕ್ಕಳಿದ್ದಾರೆ.
ಕನ್ನಡದ 250 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಸಿನಿಮಾ ಹಲವು ಧಾರಾವಾಹಿಗಳಲ್ಲೂ ನಟಿಸಿದ್ದರು. ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದ ಶಾಂತಮ್ಮ ಹಿರಿಯ ನಟಿ ಬಿ.ಜಯಶ್ರೀ ಅವರ ಸಂಬಂಧಿಯೂ ಹೌದು.
ಕ್ಯಾನ್ಸರ್’ನಿಂದ ಬಳಲುತ್ತಿದ್ದ ಶಾಂತಮ್ಮ ಹಿಂದೊಮ್ಮೆ ಅಂದಿನ ಸಿಎಂ ಸಿದ್ದರಾಮಯ್ಯ ಬಳಿ ಚಿಕಿತ್ಸೆಗೆ ನೆರವು ಯಾಚಿಸಿದ್ದರು.
ಕಳೆದ ಕೆಲ ವರ್ಷಗಳಿಂದ ಮೈಸೂರಿನ ಪುತ್ರಿ ಮನೆಯಲ್ಲಿ ವಾಸವಾಗಿದ್ದ ಶಾಂತಮ್ಮ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಭಾನುವಾರ ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ.
ಚಿನ್ನಾರಿಮುತ್ತ, ಚಂದವಳ್ಳಿ ತೋಟ, ಕೆಂಡದ ಮಳೆ, ಬಾಂಬೆ ದಾದಾ, ಗಜೇಂದ್ರ, ಶೃತಿ ಸೇರಿದಾಗ, ಲಾಕ್ ಅಪ್ ಡೆತ್, ರೂಪಾಯಿರಾಜ್, ನಮ್ಮೂರ ಮಂದಾರ ಹೂವೆ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು.
ಸೋಮವಾರ ಶಾಂತಮ್ಮ ಅವರ ಅಂತ್ಯಕ್ರಿಯೆ ನಡೆಯಲಿದೆ.

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!