ಬೆಂಗಳೂರು: ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಅಸ್ತಿತ್ವಕ್ಕೆ ಬರುವ ಸಾಧ್ಯತೆ ನಿಚ್ಚಳವಾಗಿದೆ. ನವೆಂಬರ್ 1ರಂದು ಈ ಕುರಿತು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ. ಬಿಜೆಪಿ ನಾಯಕ ಆನಂದ್ ಸಿಂಗ್ ಪ್ರತ್ಯೇಕ ವಿಜಯ ನಗರ ಜಿಲ್ಲೆ ರಚನೆಗಾಗಿ ಬೇಡಿಕೆ ಮಂಡಿಸಿದವರಲ್ಲಿ ಮೊದಲಿಗರಾಗಿದ್ದಾರೆ.
ಆದರೆ ಶ್ರೀರಾಮುಲು ಸೇರಿದಂತೆ ಜನಾರ್ದನ ರೆಡ್ಡಿ ಪಾಳಯದಲ್ಲಿ ಗುರುತಿಸಿಕೊಂಡ ಬಿಜೆಪಿ ನಾಯಕರು ಇದನ್ನು ವಿರೋಧಿಸಿದ್ದರು. ಇದರಿಂದ ಬಳ್ಳಾರಿ ಜಿಲ್ಲೆಯ ಮಹತ್ವ ಕಡಿಮೆಯಾಗಲಿದೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದರು.
ಇದೀಗ ಎಲ್ಲ ಅಡೆ ತಡೆಗಳನ್ನು ನಿವಾರಿಸಿ ಅಂತಿಮವಾಗಿ ನವೆಂಬರ್ ಒಂದರಂದು ನೂತನ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದೆ