newsics.com
ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ ಈ ಘಟನೆ ನಡೆದಿದೆ.
ನಿರಂತರ ಮಳೆಯಿಂದಾಗಿ ನೆಲೋಗಲ್-ಬೆಳ್ಳಟ್ಟಿ ಮಧ್ಯದ ಹಳ್ಳ ಭರ್ತಿಯಾಗಿ ಹರಿಯುತ್ತಿದೆ.
ರಸ್ತೆ ದಾಟುವಾಗ ಹಳ್ಳದ ನೀರಿಗೆ ಸಿಲುಕಿ ಕಾರೊಂದು ಕೊಚ್ಚಿಹೋಗುತ್ತಿತ್ತು. ಕಾರು, ಲಕ್ಷ್ಮೇಶ್ವರದಿಂದ ಬೆಳ್ಳಟ್ಟಿಗೆ ಹೊರಟಿತ್ತು.