ಬೆಂಗಳೂರು: ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಲೆನೋವಾಗಿ ಪರಿಣಮಿಸಿದ್ದು, ತಮ್ಮ ವಿದೇಶ ಪ್ರವಾಸ ರದ್ದುಗೊಳಿಸಿದ್ದಾರೆ.
ಹೈಕಮಾಂಡ್ ನಿಂದ ಅನುಮತಿ ಸಿಕ್ಕರೆ ಜ.17ರಂದು ಸಂಪುಟ ವಿಸ್ತರಣೆ ಮಾಡುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಹಿಂದೆ ಕುಮಾರಸ್ವಾಮಿ ವಿದೇಶ ಪ್ರವಾಸ ತೆರಳಿದ್ದಾಗಲೇ ಸರ್ಕಾರ ಬೀಳಿಸುವ ತಂತ್ರ ರೂಪುಗೊಂಡಿತ್ತು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಪ್ರಧಾನಿ ಮೋದಿ ಜತೆಗಿನ ಸ್ವಿಟ್ಜರ್ಲೆಂಡ್ ಪ್ರವಾಸ ರದ್ದುಗೊಳಿಸಿಕೊಂಡಿದ್ದಾರೆ ಎನ್ನಲಾಗಿದ್ದು, ಸಂಪುಟ ವಿಸ್ತರಣೆಗೆ ಮೊದಲ ಆದ್ಯತೆ ನೀಡಿದ್ದಾರೆ.
ಕೊಪ್ಪಳ ಪ್ರವಾಸವನ್ನೂ ರದುಗೊಳಿಸಿದ ಸಿಎಂ ಯಡಿಯೂರಪ್ಪ ಗುರುವಾರ ಬೆಂಗಳೂರಿನಲ್ಲೇ ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ಜತೆ ಚರ್ಚೆ ನಡೆಸಿದರು. ಉಪ ಚುನಾವಣೆಯಲ್ಲಿ ಗೆದ್ದು ಬಂದಿರುವ 11 ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ವಿಚಾರ ಯಡಿಯೂರಪ್ಪ ಅವರಿಗೆ ಸಂಕಟ ಉಂಟುಮಾಡಿದೆ.