newsics.com
ಬೆಂಗಳೂರು: ಮತದಾರರ ಪಟ್ಟಿ ಅಕ್ರಮದ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ವಿಚಾರಣೆಗೆ ಗುರಿಪಡಿಸಲು ಪೊಲೀಸರು ಸಿದ್ದತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ಹಲಸೂರು ಗೇಟ್ ಠಾಣೆ ಪೊಲೀಸರು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ.
ಚಿಲುಮೆ ಸಂಸ್ಥೆ ಮತದಾರರ ಪಟ್ಟಿ ಅಕ್ರಮದಲ್ಲಿ ಶಾಮೀಲಾಗಿದೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ.
ಈ ಸಂಬಂಧ ಚಿಲುಮೆ ಸಂಸ್ಥೆಯ ಮುಖ್ಯಸ್ಛ ರವಿ ಕುಮಾರ್ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ಮಂಗಳವಾರ ರವಿ ಕುಮಾರ್ ಆಪ್ತ ರಾಗಿರುವ ಅಭಿಷೇಕ್ ಮತ್ತು ಮಾರುತಿ ಎಂಬವರನ್ನು ಬಂಧಿಸಲಾಗಿತ್ತು.