newsics.com
ಬೆಂಗಳೂರು: ವರಿಷ್ಠರಿಂದ ಸಂದೇಶ ಬಂದ ತಕ್ಷಣ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ತಿಳಿಸಿದ್ದಾರೆ.
ಸೋಮವಾರ ಬೆಂಗಳೂರಿನ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವರಿಷ್ಠರಿಂದ ಸೂಚನೆ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆಯಾಗಲಿದೆ. ಆದರೆ ಈವರೆಗೆ ತಮಗೆ ಯಾವುದೇ ನಿರ್ದೇಶನ ಬಂದಿಲ್ಲ, ವರಿಷ್ಠ ಸಂದೇಶಕ್ಕಾಗಿ ಕಾಯುತ್ತಿರುವುದಾಗಿ ಹೇಳಿದರು.
ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಆರೋಗ್ಯವಂತರೂ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಇದನ್ನು ತಪ್ಪಿಸಲು ಸೂಕ್ತ ಆರೋಗ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಸುರಕ್ಷತಾ ಕ್ರಮಗಳ ಮೂಲಕ ಸೋಂಕು ನಿಯಂತ್ರಣಕ್ಕೆ ಜನ ಮುಂದಾಗಬೇಕು ಎಂದು ಅವರು ಮನವಿ ಮಾಡಿದರು.
ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಹೆಚ್ಚಿನ ಪ್ರಮಾಣದ ಜೀವ ಹಾನಿಯಾಗಿಲ್ಲ, ಸರ್ಕಾರ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲಾಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
ವರಿಷ್ಠರಿಂದ ಸಂದೇಶ ಬಂದಾಕ್ಷಣ ಸಂಪುಟ ವಿಸ್ತರಣೆ- ಬಿಎಸ್’ವೈ
Follow Us