newsics.com
ರಾಯಚೂರು: ರಾಜ್ಯದ ರಾಯಚೂರಿನಲ್ಲಿ ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಮೂವರು ಮೃತಪಟ್ಟಿದ್ದಾರೆ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ
ಮೃತ ಪಟ್ಟವರನ್ನು ಪರಮೇಶ್, ಜಯಮ್ಮ ಮತ್ತು ಭರತ್ ಎಂದು ಗುರುತಿಸಲಾಗಿದೆ. ಇಂದು ನಸುಕಿನ ಜಾವ ಈ ದುರಂತ ಸಂಭವಿಸಿದೆ. ಮನೆಯ ಎಲ್ಲರೂ ಗಾಢ ನಿದ್ದೆಯಲ್ಲಿ ಇದ್ದಾಗ ಗೋಡೆ ಅವರ ಮೇಲೆ ಕುಸಿದು ಬಿದ್ದಿದೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.