newsics.com
ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ ಕಾನೂನು ಅಭಿಪ್ರಾಯ ಪಡೆದು ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಹಿಜಬ್ ವಿಚಾರ ಕೋರ್ಟ್ ನಲ್ಲಿ ಇದೆ. ಲೀಗಲ್ ಒಪಿನಿಯನ್ ತಗೊಂಡು ಮುಂದೆ ಮಾತಾಡ್ತೀನಿ. ನಾಳೆಯಿಂದ ಶಾಲೆ ಪ್ರಾರಂಭವಾಗಲಿದ್ದು, ಶಿಕ್ಷಣ ಇಲಾಖೆ ಸಿದ್ಧವಾಗಿದೆ. ಮಕ್ಕಳು ಖುಷಿಯಿಂದ ಶಾಲೆಗೆ ಬನ್ನಿ ಎಂದರು.
ಸಾಹಿತಗಳ ಮನವಿ ಬೆನ್ನಲ್ಲೇ ಪಠ್ಯಪುಸ್ತಕ ಪರಿಷ್ಕರಣೆಗೆ ಸಿದ್ದರಾಮಯ್ಯ ಸರ್ಕಾರ ಚಾಲನೆ ಕೊಟ್ಟಿದೆ. ಸೋಮವಾರವಷ್ಟೇ ಸಾಹಿತಿಗಳ ನಿಯೋಗ ಸಿದ್ದರಾಮಯ್ಯ ಭೇಟಿಯಾಗಿ ಪಠ್ಯಪುಸ್ತಕ ಪರಿಷ್ಕರಣೆಗೆ ಒತ್ತಾಯ ಮಾಡಿತ್ತು. ಆ ಬಳಿಕ ಸಾಹಿತಿಗಳ ಒತ್ತಾಯದ ಮೇರೆಗೆ ಪಠ್ಯಪುಸ್ತಕ ಪರಿಷ್ಕರಣೆ ಮಾಡೋದಾಗಿ ಸರ್ಕಾರ ಹೇಳಿದೆ.