Wednesday, October 5, 2022

‘ಬಾನುಲಿ ಕವಿ’, ‘ಸೈಕಲ್ ಕವಿ’ ವಿ.ಸಿ. ಐರಸಂಗ ಇನ್ನಿಲ್ಲ

Follow Us

newsics.com
ಧಾರವಾಡ: ಪ್ರೀತಿಯಿಂದ ‘ಐರಸಂಗ ಕಾಕಾ’ ಎಂದೇ ಕರೆಸಿಕೊಳ್ಳುತ್ತಿದ್ದ ಹಿರಿಯ ಕವಿ ಡಾ‌.ವಿ.ಸಿ. ಐರಸಂಗ (91) ಶುಕ್ರವಾರ ನಿಧನರಾದರು.
ಆಕಾಶವಾಣಿಯ ಭಾವಸಂಗಮದ ಹಾಡುಗಳ ಮೂಲಕ ನಾಡಿನ ಬಹುಪಾಲು ಶೋತೃಗಳಿಗೆ ಚಿರಪರಿಚಿತರಾಗಿದ್ದ ಐರಸಂಗ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಅವರಿಗೆ ಮಗ, ಮಗಳು, ಮೊಮ್ಮಕ್ಕಳಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಬೆಳಗ್ಗೆ 11.30ಕೈ ಹೊಸ ಯಲ್ಲಾಪೂರ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಜನಸಾಮಾನ್ಯರೊಂದಿಗಿದ್ದೇ ಕಾವ್ಯಲೋಕದ ಕಣಿ ಎನಿಸಿಕೊಂಡಿದ್ದ ಅವರು, ತಮ್ಮ ಜೀವನದುದ್ದಕ್ಕೂ ಬಡತನದ ಹಾಸಿಗೆಯಲ್ಲೇ ಮಲಗಿ ಎದ್ದವರು. ಸುಮಾರು ಆರು ದಶಕಗಳ ಕಾಲ ಕಾವ್ಯ ಕೃಷಿ ಮಾಡಿದ್ದ ಅವರು, 50ಕ್ಕೂ ಹೆಚ್ಚು ಕವನ ಸಂಕಲನಗಳನ್ನು ರಚಿಸಿದ್ದರು. ಮಾರುತಿ ಪ್ರಕಾಶನ ಸಂಸ್ಥೆಯನ್ನು ಅವರೇ ಹುಟ್ಟುಹಾಕಿದ್ದರು. ಧಾರವಾಡದ ಕರ್ಣಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. ಧಾರವಾಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿದ್ದ ಅವರು ಸೈಕಲ್’ನಲ್ಲೇ ಬಂದು ಗಮನ ಸೆಳೆದಿದ್ದರು. ಸದಾಕಾಲ ಸೈಕಲ್’ನೊಂದಿಗೇ ಜೀವನ ಸಾಗಿಸುತ್ತಿದ್ದ ಅವರನ್ನು ಜನರು ‘ಸೈಕಲ್ ಕವಿ’ ಎಂದೇ ಕರೆಯುತ್ತಿದ್ದರು.
ಅವರ ಬದುಕು ಸರಳ, ಸುಂದರ. ತಾವು ಬರೆದ ಕವನ ಸಂಕಲಗಳನ್ನು ಜೋಳಿಗೆಯಲ್ಲಿ ಹಾಕಿಕೊಂಡು, ಧಾರವಾಡದ ಅತ್ತಿಕೊಳ್ಳದ ದಿನ್ನೆ ಹತ್ತಿ, ಶ್ರೀರಾಮನಗರದ ಏರುಗಳಲ್ಲಿ ಸೈಕಲ್ ದೂಡಿಕೊಂಡು, ಒಬ್ಬ ಸಾಮಾನ್ಯ ಮನುಷ್ಯನಂತೆ ಅವರು ನಡೆದುಕೊಂಡು ಹೋಗುತ್ತಿದ್ದರೆ ಆತ್ಮೀಯತೆಯಿಂದ ಜನರು ಅವರನ್ನು ದಿಟ್ಟಿಸುತ್ತಿದ್ದರು.
1947ರಲ್ಲಿ ಬರೆದ ’ಸುಪ್ರಭಾತ’ ಅವರ ಮೊದಲ ಕವನ ಸಂಕಲನ. ಅವರ ಮನೆಯಲ್ಲಿ ನಡೆಯುತ್ತಿದ್ದ ಪೂಜೆ, ಭಜನೆಗಳೇ ಅವರ ಕಾವ್ಯಕ್ಕೆ ಸ್ಫೂರ್ತಿಯಾಗಿತ್ತು. ದೇಶಭಕ್ತಿ, ನಾಡಗೀತೆ, ಪೌರಾಣಿಕ, ಪ್ರೀತಿ, ಪ್ರೇಮ, ವಿರಹ, ವಿಡಂಬನೆ, ಮಕ್ಕಳ ಸಾಹಿತ್ಯ ಹೀಗೇ ವೈವಿಧ್ಯಮಯ ವಿಷಯಗಳ ಕುರಿತು ಕಾವ್ಯ ಸೃಷ್ಟಿಸಿದ್ದು ಐರಸಂಗರ ವೈಶಿಷ್ಟ್ಯ. ಪಂ.ಮಾಧವ ಗುಡಿ, ಬಾಲಚಂದ್ರ ನಾಕೋಡ, ಸಂಗೀತಾ ಕಟ್ಟಿ, ಪರಮೇಶ್ವರ ಹೆಗಡೆ ಮುಂತಾದವರು ಐರಸಂಗರ ಕಾವ್ಯಕ್ಕೆ ದನಿಯಾಗಿದ್ದಾರೆ.

ಖ್ಯಾತ ಪತ್ರಕರ್ತ, ಸಾಹಿತಿ ರವಿ ಬೆಳಗೆರೆ ಇನ್ನಿಲ್ಲ

ಹುಬ್ಬಳ್ಳಿ ಪೊಲೀಸ್ ಕಮಿಷನರ್ ಲಾಬೂರಾಮ್ ಅಸ್ವಸ್ಥ; ಬೆಂಗಳೂರಿಗೆ ಏರ್’ಲಿಫ್ಟ್

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!