Wednesday, November 30, 2022

ಶ್ರೀಮಂತ ನಗರ ಬೆಂಗಳೂರು ಈಗ ಕಸದ ನಗರ!!

Follow Us

newsics.com

ಬೆಂಗಳೂರು: ಸ್ವಚ್ಚ ಸರ್ವೇಕ್ಷಣಾ ಶ್ರೇಯಾಂಕದಲ್ಲಿ ಬೆಂಗಳೂರಿಗೆ 45 ನಗರಗಳ ಪಟ್ಟಿಯಲ್ಲಿ 43ನೇ ಸ್ಥಾನ ಸಿಕ್ಕಿರುವುದಕ್ಕೆ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ಇದಕ್ಕೆ ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್‌ದಾಸ್ ಪೈ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಇದು ಎಂತಹ ಅವಮಾನ? ಭಾರತದ ಏಕೈಕ ಜಾಗತಿಕ ನಗರ, ಶ್ರೀಮಂತ ನಗರ ಬೆಂಗಳೂರು ಕಸದ ನಗರವಾಯಿತು. ನಾಚಿಕೆಯಾಗುತ್ತಿದೆ. ಕಟ್ಟುನಿಟ್ಟಾದ, ತುರ್ತು ಸುಧಾರಣಾ ಕ್ರಮಗಳಿಗೆ ಆಗ್ರಹಿಸಿರುವ ಪೈ, ತಮ್ಮ ಟ್ವೀಟ್‌ ಅನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಟ್ಯಾಗ್ ಮಾಡಿದ್ದಾರೆ.

ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಡೆಸುವ ಸ್ವಚ್ಛ ಸರ್ವೇಕ್ಷಣ ಸಮೀಕ್ಷೆಯ ವರದಿ ಶನಿವಾರ ಪ್ರಕಟಗೊಂಡಿದ್ದು, ಬಿಬಿಎಂಪಿ ಕಳೆದ ಬಾರಿಗಿಂತ ಈ ಬಾರಿ 15 ಸ್ಥಾನಗಳಷ್ಟು ಕುಸಿದಿದೆ. ಹತ್ತು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇರುವ 45 ನಗರಗಳ ಸ್ಥಳೀಯ ಸಂಸ್ಥೆಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿತ್ತು.  ಆ ಪೈಕಿ ಬಿಬಿಎಂಪಿ 43ನೇ ಸ್ಥಾನದಲ್ಲಿದೆ. 2020ರಲ್ಲಿ 37ನೇ ಸ್ಥಾನದಲ್ಲಿತ್ತು. 2021ರಲ್ಲಿ ಸುಧಾರಣೆ ಕಂಡು, 28ನೇ ಸ್ಥಾನಕ್ಕೆ ಬಂದಿತ್ತು. ಈಗ ಸಾಕಷ್ಟು ಕುಸಿತ ಕಂಡಿದೆ.

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!