Saturday, November 26, 2022

ಪ್ರೀತಿಸಿದವನಿಗಾಗಿ ಗಾಂಜಾ‌ ಮಾರಾಟಕ್ಕಿಳಿದ ಯುವತಿ ಈಗ ಪೊಲೀಸರ ಅತಿಥಿ!

Follow Us

newsics.com

ಬೆಂಗಳೂರು: ಪ್ರೀತಿಸಿದವನಿಗಾಗಿ ಈ ಯುವತಿ ಮನೆ ಬಿಟ್ಟು‌ ಬಂದು ಗಾಂಜಾ ಮಾರಾಟಕ್ಕಿಳಿದು, ಬೆಂಗಳೂರಿನ ಸದಾಶಿವನಗರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.

ಆಂಧ್ರಪ್ರದೇಶ ಮೂಲದ ರೇಣುಕಾ ಚೆನ್ನೈನ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಾಗ ಸಿದ್ಧಾರ್ಥನೊಂದಿಗೆ ಯುವಕನೊಂದಿಗೆ ಪ್ರೀತಿ ಹುಟ್ಟಿತ್ತು. ಬಳಿಕ ಸಿದ್ಧಾರ್ಥ್ ಬೆಂಗಳೂರಿಗೆ ಬಂದು ಗಾಂಜಾ ಮಾರಾಟಕ್ಕಿಳಿದಿದ್ದ.

ಗಾಂಜಾ‌ ಮಾರಾಟದಲ್ಲಿ ಸಹಾಯ‌ ಮಾಡುವಂತೆ ರೇಣುಕಾಳನ್ನು ಆಗಾಗ‌ ಕೇಳುತ್ತಿದ್ದ. ಪ್ರೀತಿ ವಿಚಾರದಲ್ಲಿ ಮನೆಯವರೊಂದಿಗೆ ಜಗಳ ಆಡಿದ ರೇಣುಕಾಲ ಸಿದ್ಧಾರ್ಥ್ ಮಾತಿಗೆ ಮರುಳಾಗಿ ಬೆಂಗಳೂರು ಸೇರಿ, ಗಾಂಜಾ‌ ಮಾರಾಟದಲ್ಲಿ‌ ಸಿದ್ಧಾರ್ಥಗೆ ನೆರವಾಗುತ್ತಿದ್ದಳು. ಸಿದ್ಧಾರ್ಥ್ ಗಾಂಜಾ ತರಿಸಿಕೊಂಡು ಕಸ್ಟಮರ್ ಹುಡುಕುತ್ತಿದ್ದ. ನಂತರ ರೇಣುಕಾಳನ್ನು ರಸ್ತೆ ಪಕ್ಕದಲ್ಲಿರುವ ಓಯೋ ರೂಂಗೆ ಕಳುಹಿಸಿ ಅಲ್ಲಿಗೆ ಕಸ್ಟಮರ್ ನ್ನೂ ಕಳುಹಿಸಿ, ರೇಣುಕಾಳ ಮೂಲಕ ಗಾಂಜಾ ಮಾರಿಸುತ್ತಿದ್ದ. ಇದೀಗ ರೇಣುಕಾ ಪೊಲೀಸರ ಕೈಗೆ ಸಿಕ್ಕಿಬೀಳುತ್ತಿದ್ದಂತೆ ಸಿದ್ಧಾರ್ಥ ನಾಪತ್ತೆಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಸದಾಶಿವನಗರ ಠಾಣೆ ಪೊಲೀಸರು‌ ಸಿದ್ಧಾರ್ಥನಿಗಾಗಿ ಶೋಧ ನಡೆಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!