newsics.com
ಬೆಂಗಳೂರು: ಕಾಂಗ್ರೆಸ್‌ನ ಗ್ಯಾರಂಟಿ ಘೋಷಣೆಯ ಪರಿಣಾಮವಾಗಿ ಈಗ ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರು ಜಗಳವಾಡುತ್ತಿದ್ದಾರೆ. ಟಿಕೆಟ್ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಉಚಿತ ಪ್ರಯಾಣ ಭರವಸೆ ಇನ್ನೂ ಜಾರಿಯಾಗಿಲ್ಲ ಎಂಬ ವಿಷಯವನ್ನು ಮಹಿಳೆಯರಿಗೆ ಮನವರಿಕೆ ಮಾಡುವಲ್ಲಿ ಕಂಡಕ್ಟರ್‌ಗಳು ಹೈರಾಣಾಗಿದ್ದಾರೆ.
ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂಬ ಕಾಂಗ್ರೆಸ್ ಸರ್ಕಾರದ ಚುನಾವಣಾ ಭರವಸೆಯನ್ನು ಉಲ್ಲೇಖಿಸಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಟಿಕೆಟ್ ವಿಚಾರವಾಗಿ ಕಂಡಕ್ಟರ್‌ಗಳೊಂದಿಗೆ ವಾಗ್ವಾದ ನಡೆಸುತ್ತಿದ್ದಾರೆ. ಇಂತಹ ಘಟನೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಭರವಸೆ ಈಡೇರಿಸುವಂತೆ ಒತ್ತಾಯಿಸಿದೆ.
ಟಿಕೆಟ್ ದರವನ್ನು ಪಾವತಿಸದೆ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವಂತೆ ಮಹಿಳಾ ಪ್ರಯಾಣಿಕರು ಕಂಡಕ್ಟರ್‌ಗಳನ್ನು ಒತ್ತಾಯಿಸುತ್ತಿದ್ದಾರೆ. ಬಸ್ ಪ್ರಯಾಣದ ವೇಳೆ ಸಿಬ್ಬಂದಿ ಹಾಗೂ ಪ್ರಯಾಣಿಕರ ನಡುವೆ ಹಲವು ಬಾರಿ ವಾಗ್ವಾದಗಳು ನಡೆದಿವೆ. ಇದು ಒಳ್ಳೆಯ ಲಕ್ಷಣವಲ್ಲ. ಮಹಿಳೆಯರಿಗೆ ಉಚಿತ ಪ್ರಯಾಣದ ಕುರಿತು ಸರ್ಕಾರದ ಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳುವಂತೆ ಮತ್ತು ಸಾರಿಗೆ ನಿಗಮಗಳಿಗೆ ನಿರ್ದೇಶನ ನೀಡುವಂತೆ ನಾವು ವಿನಂತಿಸುತ್ತೇವೆ’ ಎಂದು ಪತ್ರದಲ್ಲಿ ಬರೆದಿದ್ದಾರೆ.
ನಷ್ಟವನ್ನು ಕೂಡ ಅಂದಾಜಿಸಿ ಎಲ್ಲ ನಿಗಮಗಳಿಗೆ ಮುಂಚಿತವಾಗಿ ಪರಿಹಾರ ನೀಡುವಂತೆಯೂ ಒಕ್ಕೂಟ ಸರ್ಕಾರವನ್ನು ಕೋರಿದೆ.
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಭರವಸೆ ನೀಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಮೇ 20ರಂದು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಭರವಸೆ ನೀಡುವ ‘ಶಕ್ತಿ’ ಯೋಜನೆಗೆ ತಾತ್ವಿಕ ಒಪ್ಪಿಗೆ ನೀಡಿದೆ.
ಬೆತ್ತಲೆ ವಿಡಿಯೋ ಮಾಡಿದ ಯುವತಿ ಬ್ಲ್ಯಾಕ್‌ಮೇಲ್: 23 ಲಕ್ಷ ಕಳೆದುಕೊಂಡ ಬೆಂಗಳೂರು ಉದ್ಯೋಗಿ
ನೂತನ ಸಂಸತ್ ಭವನ ರಾಷ್ಟ್ರಪತಿಯವರಿಂದಲೇ ಲೋಕಾರ್ಪಣೆಯಾಗಲಿ: ಸುಪ್ರೀಂಗೆ ಮನವಿ