ತುಮಕೂರು: ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್ ಸಂಪೂರ್ಣವಾಗಿ ಕಾರ್ಯಾರಂಭ ಮಾಡಿದೆ.
ಕೇಂದ್ರ ಇಂಧನ ಸಚಿವ ಪಿಯೂಶ್ ಗೋಯಲ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ಸೌರ ವಿದ್ಯುತ್ ಉತ್ಪಾದನೆಯಲ್ಲಿ ಭಾರತ ಮುಂದಿನ ಹೆಜ್ಜೆ ಇಟ್ಟಿದೆ. ತುಮಕೂರಿನ ಪಾವಗಡೆ ವಿಶ್ವದ ದೊಡ್ಡ ಸೌರ ವಿದ್ಯುತ್ ಘಟಕ ಕಾರ್ಯಾರಂಭ ಮಾಡಿದೆ ಎಂದು ಹೇಳಿದ್ದಾರೆ.
ಪಾವಗಡದ ಸೋಲಾರ್ ಪಾರ್ಕ್ 2050 ಮೆಗಾವಾಟ್ ಸೌರ ವಿದ್ಯುತ್ ಅನ್ನು ಉತ್ಪಾದನೆ ಮಾಡುತ್ತಿದೆ. ಸುಮಾರು 12 ಸಾವಿರ ಕೋಟಿ ವೆಚ್ಚದಲ್ಲಿ 13 ಸಾವಿರ ಎಕರೆ ಪ್ರದೇಶದಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗಿದೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಾಯಚೆರ್ಲು, ತಿರುಮಣಿ, ವೆಂಕಟಮ್ಮನಹಳ್ಳಿಯಲ್ಲಿ ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್ ನಿರ್ಮಾಣಗೊಂಡಿದೆ.
ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್ ಕಾರ್ಯಾರಂಭ
Follow Us