newsics.com
ಬೆಂಗಳೂರು: ಅಪಾರ್ಟ್ಮೆಂಟ್ ಒಂದರಲ್ಲಿ ಪಾರಿವಾಳ ಹಿಡಿಯಲು ಹೋಗಿ ಆಯತಪ್ಪಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಂಜಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ಮೆಂಟ್ ನ ನಾಲ್ಕನೇ ಮಹಡಿಯಿಂದ ಬಿದ್ದು ಉಮರ್ ಫಾರೂಕ್( 19) ಎನ್ನುವ ಯುವಕ ಸಾವನ್ನಪ್ಪಿದ್ದಾನೆ.
ವಿದ್ಯಾರ್ಥಿಯಾಗಿರುವ ಯುವಕ ಭೂಪಸಂದ್ರ ಮನೆಯೊಂದರಲ್ಲಿ ಉಳಿದುಕೊಂಡಿದ್ದ. ಮನೆ ಬಳಿ ಪಾರಿವಾಳ ಸಾಕುವ ಹವ್ಯಾಸ ಬೆಳಸಿಕೊಂಡಿದ್ದ. ಮನೆ ಬಳಿ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಪಾರಿವಾಳ ಬರುತ್ತಿದ್ದವು. ಇದನ್ನು ನೋಡಿ ಹೇಗಾದರೂ ಮಾಡಿ ಪಾರಿವಾಳ ಹಿಡಿಯಬೇಕೆಂದು ಅಪಾರ್ಟ್ಮೆಂಟ್ ಮೇಲೆ ಹತ್ತುವಾಗ ಕಾಲು ಜಾರಿ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ.
ಸ್ಥಳೀಯರು ಮಾಹಿತಿ ಮೇರೆಗೆ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.