newsics.com
ತುಮಕೂರು: ರೈತರ ಮಕ್ಕಳಿಗೆ ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ. ಹೀಗಾಗಿ ದಯವಿಟ್ಟು ಈ ವಿಷಯವನ್ನು ಜಿಲ್ಲಾಧಿಕಾರಿ ಗಮನಕ್ಕೆ ತಂದು, ನಮ್ಮ ಸಮಸ್ಯೆ ಪರಿಹರಿಸಿ ಕೊಡಿ ಎಂದು ಯುವಕರ ಗುಂಪೊಂದು ತಹಶೀಲ್ದಾರ್ ಗೆ ಮನವಿ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಲಕ್ಕಗೊಂಡನ ಹಳ್ಳಿಯಲ್ಲಿ ನಡೆದಿದೆ.
ಜನ ಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸಿದ ತಹಶೀಲ್ದಾರ್ ಮುಂದೆ ಯುವಕರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಯುವಕರ ಅಹವಾಲು ಕೇಳಿ ನಕ್ಕ ತಹಶೀಲ್ದಾರ್ ತೇಜಸ್ವಿನಿ ಅವರು, ನಿಮ್ಮ ಸಮಸ್ಯೆಯನ್ನು ನಾನು ಜಿಲ್ಲಾಧಿಕಾರಿಗಳ ಗಮನಕ್ಕೆ ತರುತ್ತೇನೆ ಎಂದು ಯುವಕರಿಗೆ ಭರವಸೆ ನೀಡಿದ್ದಾರೆ.