newsics.com
ಮಂಗಳೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ಸ್ನೇಹಿತರು ಸೇರಿ ಹೋಟೆಲ್ ವೊಂದರಲ್ಲಿ ಆಯೋಜಿಸಲಾಗಿದ್ದ ಪಾರ್ಟಿ ವೇಳೆ ಅವರ ಮಧ್ಯೆ ಗಲಾಟೆ ನಡೆದಿದೆ. ಮಾತಿನ ಚಕಮಕಿ ನಡೆದಿದೆ.
ಗಲಾಟೆ ವಿಪರೀತ ಹಂತಕ್ಕೆ ಹೋದ ಬಳಿಕ ಸ್ನೇಹಿತನೊಬ್ಬ ಧನುಷ್ ಎಂಬಾತನಿಗೆ ಚೂರಿಯಿಂದ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ಇದೀಗ ಧನುಷ್ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಮಂಗಳೂರಿನ ಪಚ್ಚನಾಡಿನ ನಿವಾಸಿಯಾಗಿದ್ದ ಧನುಷ್ ಕೂಡ ಈ ಪಾರ್ಟಿಯಲ್ಲಿ ಭಾಗವಹಿಸಿದ್ದ.
ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ