newsics.com
ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಇಂದು (ಜೂ. 1) ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ.
ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು ಹಳಿಯಲ್ಲಿ ನಿಂತಿತ್ತು. ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಇಳಿದ ನಂತರ ಈ ಘಟನೆ ಸಂಭವಿಸಿದೆ. ಹೀಗಾಗಿ ಘಟನೆಯಲ್ಲಿ ಯಾರೊಬ್ಬರಿಗೂ ಹಾನಿಯಾಗಿಲ್ಲ ಎಂದು ಅಗ್ನಿಶಾಮಕ ರಕ್ಷಣಾ ಅಧಿಕಾರಿ ತಿಳಿಸಿದ್ದಾರೆ.
ಕಣ್ಣೂರು ಅಗ್ನಿಶಾಮಕ ಠಾಣೆಯ ಅಧಿಕಾರಿಯೊಬ್ಬರು ಮಾತನಾಡಿ, ಘಟನೆಯ ಬಗ್ಗೆ ನಮಗೆ ಮುಂಜಾನೆ 1.30 ರ ಸುಮಾರಿಗೆ ಮಾಹಿತಿ ಸಿಕ್ಕಿತು. ನಾವು ಸ್ಥಳಕ್ಕೆ ತಲುಪಿದಾಗ, ಒಂದು ಕೋಚ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಬೆಂಕಿ ನಂದಿಸುವ ಕಾರ್ಯಕ್ಕೆ ನಾಲ್ಕು ಅಗ್ನಿಶಾಮಕ ವಾಹನಗಳನ್ನು ಬಳಸಿಕೊಳ್ಳಲಾಯಿತು ಎಂದು ತಿಳಿಸಿದ್ದಾರೆ.
ರೈಲಿನ ಹಿಂಬದಿಯಲ್ಲಿರುವ ಮೂರನೇ ಕೋಚ್‌ಗೆ ಬೆಂಕಿ ಹೊತ್ತಿಕೊಂಡಿದೆ. ವಿಧಿವಿಜ್ಞಾನ ತನಿಖೆಯಿಂದ ಘಟನೆಗೆ ನಿಖರ ಕಾರಣ ಏನೆಂದು ತಿಳಿಯಲಿದೆ ಎಂದು ಅವರು ಹೇಳಿದರು.