ಬೆಂಗಳೂರು: ರಾಜಧಾನಿ ಬೆಂಗಳೂರಿನಿಂದ ಕೇರಳದ ಎರ್ನಾಕುಳಂಗೆ ತೆರಳುತ್ತಿದ್ದ ಕೇರಳ ರಾಜ್ಯ ಸಾರಿಗೆ ಸಂಸ್ಶೆಗೆ ಸೇರಿದ ವೋಲ್ವೋ ಬಸ್ ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸತ್ತವರ ಸಂಖ್ಯೆ 19ಕ್ಕೆ ಏರಿದೆ. ನಸುಕಿನ ಜಾವ 3. 30ರ ಹೊತ್ತಿಗೆ ಈ ದುರಂತ ಸಂಭವಿಸಿದೆ. ತಮಿಳುನಾಡಿನ ಕೊಯಂಬತ್ತೂರು ಸಮೀಪದ ಅವಿನಾಶಿ ಎಂಬಲ್ಲಿ ದುರಂತ ನಡೆದಿದ್ದು, ಬಸ್ ನ ಚಾಲಕ ಮತ್ತು ನಿರ್ವಾಹಕ ಕೂಡ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಭೀಕರ ಅಪಘಾತ ಕುರಿತು ಕೇರಳ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದೆ.