newsics.com
ಕೇರಳ: ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಇರುವುದಕ್ಕೆ ಸಂಬಂಧಪಟ್ಟಂತೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಪ್ರಧಾನಿ ನರೇಂದ್ರ ಮೋದಿಯ ಭಾವಚಿತ್ರವಿಲ್ಲದ ಕೋವಿಡ್ ಲಸಿಕೆ ಪ್ರಮಾಣ ಪತ್ರ ಒದಗಿಸಬೇಕೆಂದು ಕೋರಿ ಕೊಟ್ಟಾಯಂ ನಿವಾಸಿ ಎಂ ಪೀಟರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎರಡು ವಾರಗಳೊಳಗಾಗಿ ತಮ್ಮ ಅಭಿಪ್ರಾಯ ತಿಳಿಸಬೇಕೆಂದು ಕೋರ್ಟ್ ಹೇಳಿದೆ.
ರಾಜ್ಯದಲ್ಲಿ ಹೊಸದಾಗಿ 451 ಕೊರೋನಾ ಪ್ರಕರಣ ಪತ್ತೆ, 1455 ಮಂದಿ ಗುಣಮುಖ, 9 ಸಾವು