ನವದೆಹಲಿ; ಅಯೋಧ್ಯಾ ರಾಮಮಂದಿರ ಭೂ ವಿವಾದಕ್ಕೆ ಸಂಬಂಧಿಸಿದಂತೆ ನೀಡಿದ್ದ ಐತಿಹಾಸಿಕ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲಾ 18 ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ಗುರುವಾರ ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ ಐದು ಸದಸ್ಯರ ನ್ಯಾಯಪೀಠ ತಮ್ಮ ಕೊಠಡಿಯಲ್ಲಿ ಮರುಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿತು.
ನವೆಂಬರ್ 9ರಂದು ವಿವಾದಿತ ಅಯೋಧ್ಯಾ ಭೂಮಿ
ರಾಮಲಲ್ಲಾ ಸಂಘಟನೆಗೆ ಸೇರಬೇಕು ಎಂದು ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ಅಲ್ಲಿ ರಾಮಮಂದಿರ
ನಿರ್ಮಿಸಲು ಪ್ರತ್ಯೇಕ ಟ್ರಸ್ಟ್ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಜೊತೆಗೆ
ಮಸೀದಿ ನಿರ್ಮಾಣಕ್ಕೆ ಐದು ಎಕರೆ ಪ್ರತ್ಯಾಕ ಜಾಗ ನೀಡುವಂತೆ ನಿರ್ದೇಶಿಸಿತ್ತು. ಇದನ್ನು
ಪ್ರಶ್ನಿಸಿ ನಿರ್ಮೋಹಿ ಅಕಾರ ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹಾಗೂ 40
ನಾಗರಿಕ ಹಕ್ಕುಗಳ ಕಾರ್ಯಕರ್ತರು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.