ನವದೆಹಲಿ: ಜಾಮಿಯಾ ವಿವಿ ಆವರಣದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕೇಂಬ ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಸರ್ವೋಚ್ಚ ನ್ಯಾಯಾಲಯ ವಿಚಾರಣಾ ನ್ಯಾಯಾಲಯ ಅಲ್ಲ. ಅರ್ಜಿ ದಾರರು ಮೊದಲಿಗೆ ಹೈ ಕೋರ್ಟ್ ಮೊರೆ ಹೋಗಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ವ್ಯಾಪಕ ಹಿಂಸಾಚಾರ ಸಂಬಂಧ ಸೂಕ್ತ ತನಿಖೆಗೆ ನ್ಯಾಯಾಲಯ ಆದೇಶ ನೀಡಬೇಕು ಎಂದು ಕೋರಿ ಮನವಿ ಸಲ್ಲಿಸಲಾಗಿತ್ತು.