ಪಟನಾ: ದೇಶಾದ್ಯಂತ ಜೂನ್ 1ರಿಂದ ಒಂದು ದೇಶ ಒಂದು ಪಡಿತರ ಚೀಟಿ ವ್ಯವಸ್ಥೆ ಜಾರಿಗೆ ಬರಲಿದೆ.
ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ಈ ಮಾಹಿತಿ ನೀಡಿದ್ದಾರೆ.
ಈ ವ್ಯವಸ್ಥೆ ಮೂಲಕ ಫಲಾನುಭವಿಗಳು ಒಂದು ಪಡಿತರ ಚೀಟಿ ಹೊಂದಿದ್ದರೆ ದೇಶದ ಯಾವುದೇ ಭಾಗದಲ್ಲೂ ಪಡಿತರ ಪಡೆಯಬಹುದು ಎಂದರು.
ಆರಂಭಿಕ ಹಂತದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಗುಜರಾತ್, ಮಹಾರಾಷ್ಟ್ರ, ಹರಿಯಾಣ, ರಾಜಸ್ಥಾನ, ಕೇರಳ, ಗೋವಾ, ಮಧ್ಯಪ್ರದೇಶ, ತ್ರಿಪುರಾ, ಜಾರ್ಖಂಡ್ ಸೇರಿ 12 ರಾಜ್ಯಗಳಲ್ಲಿ ಅನುಷ್ಠಾನಗೊಳ್ಳಲಿದೆ ಎಂದು ಪಾಸ್ವಾನ್ ಹೇಳಿದರು.
ಜೂನ್ 1ರಿಂದ ಹೊಸ ಪಡಿತರ ವ್ಯವಸ್ಥೆ
Follow Us