ನವದೆಹಲಿ: ಜವಾಹರ್ ಲಾಲ್ ನೆಹರೂ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಗಂಭೀರ ಹಲ್ಲೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಘಟನೆ ಖಂಡಿಸಿ ಮುಂಬೈ, ಹೈದರಾಬಾದ್ , ಚೆನ್ನೈ ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಗಾಯಗೊಂಡ ವಿದ್ಯಾರ್ಥಿಗಳ ಚಿತ್ರಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಶೇರ್ ಮಾಡಿದ್ದಾರೆ