ನವದೆಹಲಿ: ಆರು ಅಂತಸ್ತಿನ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 43ಕ್ಕೆ ಏರಿದೆ.. ನವದೆಹಲಿಯ ರಾಣಿ ಝಾನ್ಸಿ ರಸ್ತೆಯಲ್ಲಿರುವ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಇಂದು ಮುಂಜಾನೆ ಏಕಾಏಕಿಯಾಗಿ ಅಗ್ನಿ ವ್ಯಾಪಿಸಿತ್ತು ಎಂದು ವರದಿಯಾಗಿದೆ. 25ಕ್ಕೂ ಹೆಚ್ಚು ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ನಿರತವಾಗಿವೆ. ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. 30ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಅವರಲ್ಲಿ 10ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದೆ