Thursday, December 2, 2021

ದೆಹಲಿಯಲ್ಲಿ ವೃದ್ಧೆ ಸಾವು; ಕೊರೋನಾಗೆ ಎರಡನೇ ಬಲಿ

Follow Us

ನವದೆಹಲಿ: ಕೊರೋನಾ ವೈರಸ್ ನಿಂದ ಕರ್ನಾಟಕದ ಕಲಬುರಗಿಯಲ್ಲಿ ವೃದ್ಧೆ ಮೃತಪಟ್ಟ ಬೆನ್ನಲ್ಲೇ, ಶುಕ್ರವಾರ  ದೆಹಲಿಯಲ್ಲಿ 69 ವೃದ್ಧೆ ಮಾರಕ ವೈರಸ್ಗೆ ಬಲಿಯಾಗಿದ್ದಾರೆ.
ಎರಡು ದಿನದ ಅಂತರದಲ್ಲಿ ದೇಶದಲ್ಲಿ ಇಬ್ಬರು ಮಾರಕ ಸೋಂಕಿನಿಂದ ಬಲಿಯಾಗಿದ್ದಾರೆ.
ದೆಹಲಿಯಲ್ಲಿ ಕೊರೋನಾ ವೈರಸ್ ಗೆ ತುತ್ತಾದ ಆರು ಮಂದಿಯಲ್ಲಿ ಮೃತ ವೃದ್ಧ ಮಹಿಳೆ ಒಬ್ಬರಾಗಿದ್ದರು. ಅಧಿಕ ರಕ್ತದೊತ್ತಡ ಮತ್ತು ಡಯಾಬಿಟಿಸ್ ಕಾಯಿಲೆ ಹೊಂದಿದ್ದ ಮಹಿಳೆಗೆ ದೆಹಲಿಯ ರಾಮಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಮೃತಪಟ್ಟ ಮಹಿಳೆ ಪಶ್ಚಿಮ ದೆಹಲಿಯವರಾಗಿದ್ದು, ಕೊರೋನಾ ಸೋಂಕಿತ ಮಗನ ತಾಯಿ ಎಂದು ಗುರುತಿಸಲಾಗಿದೆ. ವೃದ್ಧೆಯ ಮಗ ಕಳೆದ ಫೆಬ್ರವರಿ 5ರಂದು ಸ್ವಿಟ್ಜರ್ಲೆಂಡ್ ಮತ್ತು ಇಟಲಿಗೆ ತೆರಳಿದ್ದರು. ಮಾರ್ಚ್ 23ರಂದು ಭಾರತಕ್ಕೆ ವಾಪಸ್ಸಾಗಿದ್ದರು. ಬಳಿಕ ಜ್ವರ ಮತ್ತು ಕೆಮ್ಮಿನಿಂದ ರಾಮಮನೋಹರ ಲೋಹಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ರಕ್ತವನ್ನು ಪರೀಕ್ಷೆ ಮಾಡಿದಾಗ ಅವರಿಗೆ ಕೊರೋನಾ ವೈರಸ್ ತಗುಲಿರುವುದು ದೃಢಪಟ್ಟಿತ್ತು. ಇವರೊಂದಿಗೆ ಇವರ ತಾಯಿಗೂ ಮಾರಕ ಸೋಂಕು ಹರಡಿರುವುದು ಪರೀಕ್ಷೆಯಿಂದ ಸಾಬೀತಾಗಿದ್ದು, ನಂತರ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿತ್ತು. ಇದೀಗ ತಾಯಿ ಅಸುನೀಗಿದ್ದಾರೆ.  

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!