Thursday, December 2, 2021

ನಿರ್ಭಯಾ ಕೇಸ್: ನಾಳೆ ಗಲ್ಲು ಶಿಕ್ಷೆ ಇಲ್ಲ

Follow Us

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ನಿಗದಿಯಾಗಿದ್ದ ಗಲ್ಲು ಶಿಕ್ಷೆಯನ್ನು ದಿಲ್ಲಿ ನ್ಯಾಯಾಲಯ ಮತ್ತೆ ಮುಂದೂಡಿದೆ.
ನಾಳೆ ಪ್ರಕರಣದ ನಾಲ್ಕು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿ ಮಾಡುವಂತಿಲ್ಲ ಎಂದು ಹೇಳಿದೆ. ಈ ಹಿಂದೆ ದೆಹಲಿ ಹೈಕೋರ್ಟ್ ಮಾರ್ಚ್ 3ಕ್ಕೆ ನಿರ್ಭಯಾ ಹತ್ಯಾಚಾರಿಗಳನ್ನು ಗಲ್ಲಿಗೇರಿಸುವಂತೆ ಆದೇಶ ನೀಡಿತ್ತು. ಅದರಂತೆ ನಾಳೆ ಎಲ್ಲ ನಾಲ್ಕೂ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಯಾಗಲಿದೆ ಎಂದೇ ಭಾವಿಸಲಾಗಿತ್ತು. ಆದರೆ ದೆಹಲಿ ಕೋರ್ಟ್ ಇದೀಗ ಗಲ್ಲು ಶಿಕ್ಷೆ ಜಾರಿಗೆ ತಡೆಯಾಜ್ಞೆ ನೀಡಿದೆ. ಹೊಸದಾಗಿ ಡೆತ್ ವಾರಂಟ್ ಜಾರಿ ಮಾಡುವಂತೆ ಸೂಚಿಸಿದೆ.
ದೆಹಲಿ ಕೈದಿಗಳ ನಿಯಮಾವಳಿಗಳ ಪ್ರಕಾರ ಗಲ್ಲು ಶಿಕ್ಷೆಗೆ ಗುರಿಯಾದ ಯಾವುದೇ ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕಾರಗೊಂಡರೆ ಅಪರಾಧಿಗೆ ಅಂದಿನಿಂದ 14 ದಿನಗಳ ಕಾಲ ಕಾಲಾವಕಾಶ ನೀಡಬೇಕು. ಇದೇ ಕಾರಣಕ್ಕೆ ನ್ಯಾಯಾಲಯ ಗಲ್ಲು ಶಿಕ್ಷೆ ಜಾರಿಯನ್ನು ತಡೆಹಿಡಿದಿದೆ ಎನ್ನಲಾಗುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ 66...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!