ನವದೆಹಲಿ: ರಾಷ್ಟ್ರಪತಿಗಳು ತರಾತುರಿಯಲ್ಲಿ ದಯಾ ಅರ್ಜಿ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ನಿರ್ಭಯಾ ಕೇಸ್ ನ ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ.
ವಿನಯ್ ಶರ್ಮಾ ಸಲ್ಲಿಸಿದ್ದ ದಯಾ ಅರ್ಜಿ ತಿರಸ್ಕರಿಸಬೇಕೆಂಬ ಮನವಿಗೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಮತ್ತು ದೆಹಲಿಯ ಗೃಹ ಸಚಿವರು ಸಹಿ ಹಾಕುತ್ತಿಲ್ಲ ಎಂದು ಆರೋಪಿಸಿದರು.
ನ್ಯಾಯಮೂರ್ತಿಗಳಾದ ಆರ್. ಬಾನುಮತಿ, ಅಶೋಕ್ ಭೂಷಣ್, ಎ.ಎಸ್.ಬೋಪಣ್ಣ ಅವರನ್ನೊಳಗೊಂಡ ನ್ಯಾಯಪೀಠ ದಾಖಲೆ ಪರಿಶೀಲಿಸಿ, ಲೆಫ್ಟಿನೆಂಟ್ ಗವರ್ನರ್ ಮತ್ತು ಗೃಹ ಸಚಿವರು ಸಹಿ ಹಾಕಿರುವುದನ್ನು ಖಾತರಿ ಪಡಿಸಿಕೊಂಡ ಬಳಿಕ ಅರ್ಜಿಯನ್ನು ತಿರಸ್ಕರಿಸಿತು.
ನಿರ್ಭಯಾ ಕೇಸ್: ರಾಷ್ಟ್ರಪತಿಗಳ ನಿರ್ಧಾರ ಪ್ರಶ್ನಿಸಿದ್ದ ಅರ್ಜಿ ವಜಾ
Follow Us