ನವದೆಹಲಿ: ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳನ್ನು ಫೆ.1ರಂದು ಬೆಳಗ್ಗೆ 6 ಗಂಟೆಗೆ ಗಲ್ಲಿಗೇರಿಸುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.
ಈ ಮೊದಲು ಜ.22ರಂದು ಗಲ್ಲಿಗೇರಿಸುವಂತೆ ಆದೇಶ ನೀಡಿತ್ತಾದರೂ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿರಸ್ಕರಿಸಿದ ಬೆನ್ನಲ್ಲೇ ಶುಕ್ರವಾರ ದೆಹಲಿ ಹೈಕೋರ್ಟ್ ಈ ಆದೇಶ ನೀಡಿದೆ.
ದೆಹಲಿ ಹೈಕೋರ್ಟ್ ಆದೇಶ ನೀಡಿದ್ದರೂ ಉಳಿದ ಮೂವರು ಅಪರಾಧಿಗಳು ಕ್ಷಮಾದಾನ ಅರ್ಜಿ ಸಲ್ಲಿಸಿದರೆ ಮರಣದಂಡನೆ ದಿನ ಮತ್ತೆ ಮುಂದೂಡಿಕೆಯಾಗುವ ಸಾಧ್ಯತೆಯಿದೆ.
ನಿರ್ಭಯಾ ಕೇಸ್; 4 ಅಪರಾಧಿಗಳಿಗೆ ಫೆ.1ರಂದು ಗಲ್ಲು
Follow Us