ನ್ಯೂ ಜೆರ್ಸಿ: ಅಮೆರಿಕದ ನ್ಯೂಜೆರ್ಸಿಯಲ್ಲಿ ಗುಂಡಿನ ದಾಳಿ ನಡೆದಿದೆ. ಇಬ್ಬರು ಶಂಕಿತರು ನಡೆಸಿದ ಗುಂಡಿನ ದಾಳಿಗೆ ಪೊಲೀಸ್ ಅಧಿಕಾರಿ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.