ಜಮ್ಮು: ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.
ಪೂಂಛ್ ವಲಯದಲ್ಲಿ ಪಾಕಿಸ್ತಾನ ನಡೆಸಿದ ಈ ಗುಂಡಿನ ದಾಳಿಯಲ್ಲಿ ಇಬ್ಬರು ನಾಗರಿಕರು ಸಾವಿಗೀಡಾಗಿದ್ದು, ಇನ್ನಿಬ್ಬರು ಯೋಧರು ಗಾಯಗೊಂಡಿದ್ದಾರೆ.
ಪಾಕ್ ನ ಈ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದ್ದು, ಈ ವೇಳೆ ಇಬ್ಬರು ಗಾಯಗೊಂಡಿದ್ದಾರೆ.