ನವದೆಹಲಿ: ಕೇಂದ್ರ ಸರ್ಕಾರ ಈ ಸಾಲಿನ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಿದೆ.
ಏಳು ಗಣ್ಯರಿಗೆ ಪದ್ಮವಿಭೂಷಣ, 16 ಸಾಧಕರಿಗೆ ಪದ್ಮ ಭೂಷಣ ಹಾಗೂ 118 ಜನರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ.
ಪೇಜಾವರ ವಿಶ್ವೇಶತೀರ್ಥ ಸ್ವಾಮಿಗಳಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಕೇಂದ್ರದ ಮಾಜಿ ಸಚಿವರಾದ ಜಾರ್ಜ್ ಫರ್ನಾಂಡೀಸ್, ಅರುಣ ಜೇಟ್ಲಿ ಹಾಗೂ ಸುಷ್ಮಾ ಸ್ವರಾಜ್ ಅವರಿಗೂ ಮರಣೋತ್ತರವಾಗಿ ಪದ್ಮವಿಭೂಷಣ ಘೋಷಿಸಲಾಗಿದೆ.
ಹರೇಕಳ ಹಾಜಬ್ಬ, ತುಳಸಿ ಗೌಡ, ವಿಜಯ ಸಂಕೇಶ್ವರ, ಎಂ.ಪಿ.ಗಣೇಶ, ಬೆಂಗಳೂರು ಗಂಗಾಧರ, ಕೆ.ವಿ.ಸಂಪತ್ ಕುಮಾರ ಹಾಗೂ ವಿದುಷಿ ಜಯಲಕ್ಷ್ಮಿ ಕೆ.ಎಸ್. (ಜಂಟಿಯಾಗಿ), ಭರತ್ ಘೋಯೆಂಕಾ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.
ಪೇಜಾವರ ಶ್ರೀಗಳಿಗೆ ಪದ್ಮವಿಭೂಷಣ, ಇತರ 8 ಸಾಧಕರಿಗೆ ಪದ್ಮ ಪ್ರಶಸ್ತಿ
Follow Us