ಲಕ್ನೋ: ಉತ್ತರಪ್ರದೇಶದಲ್ಲಿ ಪೌರತ್ವ ಕಾನೂನು ತಿದ್ದುಪಡಿ ವಿರೋಧಿ ಹೋರಾಟದಲ್ಲಿ ಸತ್ತವರ ಸಂಖ್ಯೆ 11ಕ್ಕೆ ಏರಿದೆ. ರಾಜ್ಯದ ರಾಜಧಾನಿ ಲಕ್ನೋ ಸೇರಿದಂತೆ ಹಲವು ನಗರಗಳಲ್ಲಿ ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ ಆತಂಕ ಮನೆ ಮಾಡಿದೆ. ಜನರು ಯಾವುದೇ ರೀತಿಯ ವದಂತಿಗಳಿಗೆ ಕಿವಿ ಗೊಡದೇ ಶಾಂತಿ ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮನವಿ ಮಾಡಿದ್ದಾರೆ. ಇದೇ ವೇಳೆ ಹಿಂಸಾಚಾರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಉತ್ತರ ಪ್ರದೇಶ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ. ಆಧಾರ ರಹಿತ ವರದಿಗಳು ಸಂದೇಶಗಳು ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಆದರೆ ಇಂಟರ್ ನೆಟ್ ಸ್ಥಗಿತ ಕುರಿತಂತೆ ಇದುವರೆಗೂ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ