ಗುವಾಹಟಿ: ಪರಿಷ್ಕೃತ ಪೌರತ್ವ ಕಾನೂನು ಜಾರಿಗೊಳಿಸುವುದನ್ನು ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಮುಂದುವರಿದಿದೆ. ಮುಖ್ಯವಾಗಿ ಅಸ್ಸಾಂ ಮತ್ತು ಮೇಘಾಲಯದಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ಅಸ್ಸಾಂನಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗಿಳಿದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಜನರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಕರ್ಪ್ಯೂ ಸಡಿಲಗೊಳಿಸಲು ನಿರ್ಧರಿಸಲಾಗಿದೆ. ಗುವಾಹಟಿಯಲ್ಲಿ ಮುಂಜಾನೆ 9 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಕರ್ಫ್ಯೂ ಸಡಿಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಜಿ ಪಿ ಸಿಂಗ್ ತಿಳಿಸಿದ್ದಾರೆ. . ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಹೇಳಿದೆ.