ಲಕ್ನೋ: ಪೌರತ್ವ ತಿದ್ದುಪಡಿ ಕಾನೂನು ವಿರುದ್ಧ ಆಕ್ರೋಶ ಭುಗಿಲೆದ್ದಿರುವ ಉತ್ತರ ಪ್ರದೇಶದಲ್ಲಿ ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೂ ಶುಕ್ರವಾರದ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಗರಿಷ್ಟ ಮುನ್ನೆಚ್ಚರಿಕೆ ವಹಿಸಲಾಗಿದೆ. ಹದಿನೈದು ಜಿಲ್ಲೆಗಳಲ್ಲಿ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಹಿಂಸಾಚಾರದಲ್ಲಿ ತೊಡಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.