ನವದೆಹಲಿ: ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಬುಧವಾರ ಬಿಜೆಪಿಗೆ ಸೇರಿದ್ದು, ಈ ಮೂಲಕ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.
ಸೈನಾ ನೆಹ್ವಾಲ್ ಜತೆ ಸಹೋದರಿ ಚಂದ್ರಂಶು ಕೂಡ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.
ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ನೆಹ್ವಾಲ್, ದೇಶಕ್ಕಾಗಿ ನಾನು ಪದಕಗಳನ್ನು ಗೆದ್ದಿದ್ದೇನೆ. ನಾನು ತುಂಬಾ ಶ್ರಮ ಜೀವಿ ಮತ್ತು ಶ್ರಮ ಪಡುವವರನ್ನು ನಾನು ಇಷ್ಟಪಡುತ್ತೇನೆ. ದೇಶಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಕಷ್ಟು ದುಡಿದಿರುವುದನ್ನು ನೋಡಿದ್ದೇನೆ. ಅವರೊಂದಿಗೆ ಕೈಜೋಡಿಸಿ ದೇಶಕ್ಕಾಗಿ ಏನಾದರೂ ಮಾಡಬೇಕೆಂದು ಬಯಸಿದ್ದೇನೆ ಎಂದರು. ಅಲ್ಲದೆ, ಪ್ರಧಾನಿ ಮೋದಿ ಅವರಿಂದ ಸಾಕಷ್ಟು ಸ್ಫೂರ್ತಿಗೊಂಡಿದ್ದಾಗಿ ತಿಳಿಸಿದರು.