ಬೆಂಗಳೂರು: ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯ ವಿರುದ್ಧದ ಪ್ರತಿಭಟನೆ ವೇಳೆಯೇ ಮತ್ತೊಬ್ಬ ಯುವತಿ ಪಾಕ್ ಪರ ಘೋಷಣೆ ಕೂಗಿದ ಪ್ರಸಂಗ ಶುಕ್ರವಾರ ಟೌನ್ ಹಾಲ್ ಬಳಿ ನಡೆದಿದೆ.
ಶುಕ್ರವಾರ ಶ್ರೀರಾಮ ಸೇನೆ ಮತ್ತಿತರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ದಿಢೀರ್ ಪ್ರತ್ಯಕ್ಷಳಾದ ಅಪ್ರಾಪ್ತ ಯುವತಿ ಫ್ರೀ ಕಾಶ್ಮೀರ್ ಭಿತ್ತಿಪತ್ರ ಹಿಡಿದು ಪಾಕ್ ಪರ ಘೋಷಣೆ ಕೂಗಿದ್ದಾಳೆ. ತಕ್ಷಣ ಆಕೆಯನ್ನು ಪೊಲೀಸರು ಸುತ್ತುವರಿದು ಎಸ್ ಜೆ ಪಾರ್ಕ್ ಠಾಣೆಗೆ ಕರೆದೊಯ್ದಿದ್ದಾರೆ.
ಮಲ್ಲೇಶ್ವರಂ ನಿವಾಸಿ, ಗ್ರಾಫಿಕ್ ಡಿಸೈನರ್ ಆರ್ದ್ರಾ ಪಾಕ್ ಪರ ಘೋಷಣೆ ಕೂಗಿದ ಯುವತಿ. ಈಕೆ ಮಲ್ಲೇಶ್ವರಂ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದು, ಬಳಿಕ ಖಾಸಗಿ ಸಂಸ್ಥೆಯಲ್ಲಿ ಗ್ರಾಫಿಕ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದಳು.
ಆಕೆ ವಿರುದ್ಧ ಸುಮೋಟೋನಕೇಸ್ ದಾಖಲಿಸುವುದಾಗಿ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ ಚೇತನ್ ಸಿಂಗ್ ರಾಥೋಡ್ ಹೇಳಿದ್ದಾರೆ.