ಶ್ರೀನಗರ: ಹೊಸ ವರ್ಷದಲ್ಲಿ ಕೂಡ ಪಾಕಿಸ್ತಾನ ತನ್ನ ಹಿಂದಿನ ಚಾಳಿಯನ್ನು ಮುಂದುವರಿಸಿದೆ. ಪಾಕ್ ಬೆಂಬಲಿತ ಭಯೋತ್ಪಾದಕರು ಜಮ್ಮು ಕಾಶ್ಮೀರದ ರಜೌರಿಯಲ್ಲಿ ನಡೆಸಿದ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಇದೇ ವೇಳೆ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯನ್ನು ಸೇನೆ ತೀವ್ರಗೊಳಿಸಿದೆ. ಅಡಗುತಾಣಗಳನ್ನು ಪತ್ತೆ ಹಚ್ಚಲು ಕಾರ್ಯ ತಂತ್ರ ಹೆಣೆಯಲಾಗಿದೆ.